ಹತ್ತುಮಂದಿ ಕನ್ಯೆಯರ ಸಾಮ್ಯ
1 "ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು 25:1 ದೀವಟಿಗೆಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ. 2 ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು. 3 ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. 4 ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. 5 ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು. 6 ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು. 7 ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು. 8 ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ. 9 ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು. 10 ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು. 11 ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು. 12 ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು. 13 25:13 ಮತ್ತಾ 24:42ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.