31 25:31 ಯೋವೇ. 3:12 "ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು; 32 ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು. 33 ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು. 34 ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ. 35 ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; 36 ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. 37 ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? 38 ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? 39 ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. 40 ಅದಕ್ಕೆ ಉತ್ತರವಾಗಿ ಅರಸನು, 25:40 ಮತ್ತಾ 10:42‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. 41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ. 42 ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ. 43 ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು. 44 ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು. 45 ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು. 46 ಮತ್ತು ಅನೀತಿವಂತರಾದ ಇವರು 25:46 ದಾನಿ. 12:2; ಯೋಹಾ 5:29ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು" ಎಂದು ಹೇಳಿದನು.
Publicidade