ಸ್ನಾನಿಕನಾದ ಯೋಹಾನನ ಉಪದೇಶ
1 ಆ ದಿನಗಳಲ್ಲಿ3:1 ಯೇಸುವಿನ ಜನನದ ಹಲವು ವರ್ಷಗಳ ನಂತರ, ಸ್ನಾನಿಕನಾದ ಯೋಹಾನನು ಬೆಳೆದು ಯೌವನಸ್ಥನಾಗಿ ದೇವರ ಹಾಗೂ ಕ್ರಿಸ್ತನ ವಿಷಯವಾಗಿ ಸಾರಿದನು. ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ, 2 ಹೇಳಿದ್ದೇನೆಂದರೆ, "ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ."
3 3:3 ಯೆಶಾ 40. 3 "‘ಕರ್ತನ ದಾರಿಯನ್ನು ಸಿದ್ಧಮಾಡಿರಿ;
ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ
ಕೂಗುವವನ ಶಬ್ದವಿದೆ" ಎಂಬುದಾಗಿ ಪ್ರವಾದಿಯಾದ
ಯೆಶಾಯನಿಂದ ಸೂಚಿತನಾದವನು ಇವನೇ.
4 ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
5 ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು, 6 ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.