14 5:14 ಫಿಲಿ. 2:15ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು. 15 ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು. 16 ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.