19 ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು. 20 ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.