31 ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. 32 ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.