2 "ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 3 ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ. 4 6:4 ಮತ್ತಾ 6:6,18ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.