ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ
25 "ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. 26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? 27 6:27 ಲೂಕ 12:25-31ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ 6:27 ಆಯುಸ್ಸು ಹೆಚ್ಚು ಮಾಡಿಕೊಳ್ಳುವುದುಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು? 28 ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ; 29 ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. 30 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ! 31 ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. 32 ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ. 33 ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. 34 ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.