ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ
15 "ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ. 16 7:16 ಲೂಕ 6:43, 44.ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?