ಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆ
15 "ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ. 16 7:16 ಲೂಕ 6:43, 44.ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ? 17 ಹಾಗೆಯೇ 7:17 ಮತ್ತಾ 12:33-35.ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು; 18 ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು. 19 ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. 20 ಹೀಗಿರಲಾಗಿ ಅವರ ಫಲಗಳಿಂದಲೇ ಅವರನ್ನು ತಿಳಿದುಕೊಳ್ಳುವಿರಿ.