3 "ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ? 4 ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ. 5 ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.