Pular para o conteúdo
Publicidade

ನಹೂಮನು 1:2,3

IRVKAN Indian Revised Version (IRV) - Kannada - 2019

ನಿನವೆಯ ಮೇಲೆ ದೇವರ ಕೋಪ

2 ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ. 3 ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.

Em outras traduções

  1. OKCV Kannada Contemporary Version

    2 ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು.

    ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ.

    ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.

    ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ,

    ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.

    3 ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು.

    ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು.

    ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ.

    ಮೇಘಗಳು ಅವರ ಕಾಲುಗಳ ಧೂಳೇ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.

Naum
Ver todos os capítulos de Naum