ಧರ್ಮಶಾಸ್ತ್ರದ ಪಾರಾಯಣ
1 ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು. 2 ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು. 3 ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು. 8 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು.
18 ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.