Pular para o conteúdo
Publicidade

ನೆಹೆಮೀಯನು 8:8,10

IRVKAN Indian Revised Version (IRV) - Kannada - 2019

8 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು. 10 ಇದಲ್ಲದೆ ನೆಹೆಮೀಯನು ಅವರಿಗೆ, "ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ" ಎಂದನು.

Em outras traduções

  1. OKCV Kannada Contemporary Version

    8 ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.

    10 ಇದಲ್ಲದೆ ಎಜ್ರನು ಅವರಿಗೆ, "ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ," ಎಂದು ಹೇಳಿದನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.