Pular para o conteúdo
Publicidade

ನೆಹೆಮೀಯನು 8:8-12

IRVKAN Indian Revised Version (IRV) - Kannada - 2019

8 ಜನರು ಎದ್ದುನಿಂತ ನಂತರ ಅವರು ದೇವರ ಧರ್ಮನಿಯಮಗಳನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದಾಗ ಜನರು ಅರ್ಥಮಾಡಿಕೊಂಡರು. 9 ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, "ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ" ಎಂದು ಹೇಳಿದರು. 10 ಇದಲ್ಲದೆ ನೆಹೆಮೀಯನು ಅವರಿಗೆ, "ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ" ಎಂದನು. 11 ಲೇವಿಯರೂ ಜನರಿಗೆ, "ಸುಮ್ಮನಿರಿ, ಇದು ದೇವರ ಪರಿಶುದ್ಧ ದಿನ, ದುಃಖಿಸಬೇಡಿರಿ" ಎಂದು ಹೇಳಿ ಜನರನ್ನು ಸಂತೈಸಿದರು. 12 ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.

Em outras traduções

  1. OKCV Kannada Contemporary Version

    8 ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.

    9 ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: "ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ," ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.

    10 ಇದಲ್ಲದೆ ಎಜ್ರನು ಅವರಿಗೆ, "ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ," ಎಂದು ಹೇಳಿದನು.

    11 ಲೇವಿಯರು ಕೂಡ, "ಈ ದಿನವು ಪರಿಶುದ್ಧವಾದುದರಿಂದ ನೀವು ಶಾಂತವಾಗಿದ್ದು, ವ್ಯಥೆಪಡಬೇಡಿರಿ," ಎಂದು ಹೇಳಿ ಜನರನ್ನು ಸುಮ್ಮನಿರಿಸಿದರು.

    12 ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.