Pular para o conteúdo
Publicidade

ಅರಣ್ಯಕಾಂಡ 14:1-9

ಜನರು ಮೋಶೆಯ ವಿರುದ್ಧ ತಿರುಗಿಬಿದ್ದು ನಾಶವಾದದ್ದು

1 ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು. 2 ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, "ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು 3 ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ಈ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ" ಎಂದು ಮಾತನಾಡಿಕೊಂಡರು. 4 ಹೀಗೆ ಅವರು ಒಬ್ಬರ ಸಂಗಡಲೊಬ್ಬರು, "ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ" ಎಂದು ಮಾತನಾಡಿಕೊಂಡರು.

5 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು. 6 ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು. 7 ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, "ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು. 8 ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು. 9 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ" ಎಂದರು.

Estes versículos te tocaram? Ore agora!

+581 estão orando agora.

Junte-se à corrente de oração.