ಇಸ್ರಾಯೇಲರು ಬಟ್ಟೆಯ ಮೂಲೆಗಳಿಗೆ ಗೊಂಡೆ ಕಟ್ಟಿಕೊಳ್ಳಬೇಕೆಂಬುದು
37 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 38 "ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು. 39 ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ 40 ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ. 41 ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ."