Pular para o conteúdo
Publicidade

ಹೋಶೇಯನು 12

1 ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ.

ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ;

ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.

2 ಯೆಹೋವನು ಯೆಹೂದದ ಮೇಲೆ ವ್ಯಾಜ್ಯಕ್ಕೆ ತೊಡಗಿದ್ದಾನೆ,

ಯಾಕೋಬನ್ನು ಅದರ ನಡತೆಗೆ ತಕ್ಕ ಹಾಗೆ ದಂಡಿಸುವನು,

ಅದರ ದುಷ್ಕೃತ್ಯಗಳಿಗೆ ಪ್ರತಿಕಾರಮಾಡುವನು.

3 12:3 ಆದಿ 25:26. ಯಾಕೋಬನು ಗರ್ಭದಲ್ಲಿ ತನ್ನ ಅಣ್ಣನ ಹಿಮ್ಮಡಿಯನ್ನು ಎಳೆದನು,

ಪೂರ್ಣಪ್ರಾಯದಲ್ಲಿ ದೇವರೊಂದಿಗೆ ಹೋರಾಡಿದನು12:3 ದೇವರೊಂದಿಗೆ ಹೋರಾಡಿದನು ಆದಿ 32:24-26.;

4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು.

ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ12:4 ಅವನೊಡನೆ ನಮ್ಮೊಡನೆ ಮಾತನಾಡಿದನು.

5 ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.

6 ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ;

ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.

7 ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.

8 ಎಫ್ರಾಯೀಮು, "ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ;

ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ" ಎಂದು ಅಂದುಕೊಳ್ಳುತ್ತದೋ?

9 ನೀನು ಐಗುಪ್ತ ದೇಶದಲ್ಲಿ ಇದ್ದಂದಿನಿಂದ ನಾನೇ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ;

ಜಾತ್ರೆಯ ಕಾಲದಲ್ಲಿ ವನವಾಸಮಾಡುವಂತೆ ಗುಡಾರಗಳಲ್ಲಿ ವಾಸಿಸುವ ಗತಿಗೆ ನಿನ್ನನ್ನು ಪುನಃ ತರುವೆನು.

10 ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ.

ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.

11 ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವುದು;

ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವುದೋ?

ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.

12 ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು;

ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು.

13 ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು;

ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.

14 ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ,

ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ,

ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.

Estes versículos te tocaram? Ore agora!

+581 estão orando agora.

Junte-se à corrente de oração.