Pular para o conteúdo
Publicidade

ಜ್ಞಾನೋಕ್ತಿಗಳು 3:1-8

ಯೆಹೋವನಲ್ಲಿ ಭರವಸವಿಡು

1 ಕಂದಾ, ನನ್ನ ಉಪದೇಶವನ್ನು ಮರೆಯಬೇಡ,

ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.

2 ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ,

ನಿನಗೆ ಸುಕ್ಷೇಮವನ್ನು ಉಂಟುಮಾಡುವವು.

3 ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು,

ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.

4 ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ,

ಸಮ್ಮತಿಯನ್ನೂ ಪಡೆದುಕೊಳ್ಳುವಿ.

5 ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ

ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

6 ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು;

ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.

7 ನೀನೇ ಬುದ್ಧಿವಂತನು ಎಂದೆಣಿಸದೆ,

ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.

8 ಇದರಿಂದ ನಿನ್ನ ದೇಹಕ್ಕೆ ಆರೋಗ್ಯವೂ,

ಎಲುಬುಗಳಿಗೆ ಸಾರವೂ ಉಂಟಾಗುವವು.

Estes versículos te tocaram? Ore agora!

+581 estão orando agora.

Junte-se à corrente de oração.