Pular para o conteúdo
Publicidade

ಜ್ಞಾನೋಕ್ತಿಗಳು 31:10,13-18,20,24

ಗುಣವತಿಯಾದ ಸತಿ

10 ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು?

ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.

13 ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು,

ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.

14 ವ್ಯಾಪಾರದ ಹಡಗುಗಳಂತೆ,

ದೂರದಿಂದ ಬೇಕಾದ ಆಹಾರವನ್ನು ತರುವಳು.

15 ಇನ್ನೂ ಕತ್ತಲಿರುವಾಗಲೇ ಎದ್ದು,

ಮನೆಯವರಿಗೆ ಆಹಾರವನ್ನು, ನೀಡುವಳು

ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.

16 ಹೊಲವನ್ನು ನೋಡಿ ಯೋಚಿಸಿ ಕೊಂಡುಕೊಳ್ಳುವಳು,

ತನ್ನ ಕೈಗೆಲಸದ ಲಾಭದಿಂದ ದ್ರಾಕ್ಷಿತೋಟವನ್ನು ಮಾಡಿಸುವಳು.

17 ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು,

ತೋಳುಗಳನ್ನು ಶಕ್ತಿಗೊಳಿಸುವಳು.

18 ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು,

ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.

20 ಬಡವರಿಗಾಗಿ ಕೈ ಬಿಚ್ಚಿ,

ದಿಕ್ಕಿಲ್ಲದವರಿಗೆ ಕೈ ನೀಡುವಳು.

24 ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು,

ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.

Estes versículos te tocaram? Ore agora!

+581 estão orando agora.

Junte-se à corrente de oração.