25 ಬಲವನ್ನು, ತೇಜಸ್ಸನ್ನು ಹೊದ್ದುಕೊಂಡಿರುವಳು,
ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು.
26 ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು.
ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು.
27 ಸೋಮಾರಿತನದ ಅನ್ನವನ್ನು ತಿನ್ನದೆ,
ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.
28 ಮಕ್ಕಳು ಎದ್ದುನಿಂತು ಆಕೆಯನ್ನು "ಧನ್ಯಳು" ಎಂದು ಹೇಳುವರು.
29 ಪತಿಯು ಸಹ, "ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ,
ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು" ಎಂದು ಆಕೆಯನ್ನು ಕೊಂಡಾಡುವನು.
30 ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ,
ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.