15 ಸ್ವಂತ ಕೊಳದ ನೀರನ್ನು,
ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.
16 ನಿನ್ನ ಒರತೆಗಳು ಬಯಲಿನಲ್ಲಿಯೂ,
ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?
17 ಅವು ನಿನಗೊಬ್ಬನಿಗೇ ಹರಿಯಲಿ,
ಪರರು ನಿನ್ನೊಂದಿಗೆ ಸೇರಿ ಕುಡಿಯಬಾರದು.
18 ನಿನ್ನ ಬುಗ್ಗೆಯು ದೇವರ ಆಶೀರ್ವಾದವನ್ನು ಹೊಂದಲಿ,
5:18 ಅಥವಾ ನೀನು ಯೌವನಪ್ರಾಯದಲ್ಲಿ ಮದುವೆಯಾದ ಪತ್ನಿ. ನಿನ್ನ ಯೌವನಕಾಲದ ಪತ್ನಿಯಲ್ಲಿ ಆನಂದಿಸು.
19 ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ,
ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
20 ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ,
ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?