8 ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ
ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
9 ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು,
ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
10 ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು,
ನೀನು ಅನ್ಯನ ಮನೆಯಲ್ಲಿ ದುಡಿಯುವಿ.
11 ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
12 "ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ,
ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
13 ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ,
ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
14 ನಾನು ದೇವಜನರ ಸಭೆಯ ನಡುವೆ
ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು" ಎಂದು ಅಂದುಕೊಳ್ಳುವಿ.