22 1:22 1 ಕೊರಿ 1:20ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು. 23 1:23 1 ತಿಮೊ. 1:17ಲಯವಿಲ್ಲದ 1:23 ಕೀರ್ತ 106:20, ಯೆರೆ 2:11,ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.
24 ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು 1:24 ರೋಮಾ. 1:26,28ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು. 25 ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ 1:25 ರೋಮಾ. 9:5ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್. 26 ಅವರು ಇಂಥದ್ದನ್ನು ಮಾಡಿದ್ದರಿಂದ 1:26 ರೋಮಾ. 1:24,28ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು. 27 ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.