12 ಈ ವಿಷಯದಲ್ಲಿ 10:12 ರೋಮಾ. 3:22,29ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. 10:12 ಅ. ಕೃ. 10:36ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ. 13 ಆದ್ದರಿಂದ10:13 ಯೋವೇ. 2:32; ಅ. ಕೃ. 2:21 ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
ಇಸ್ರಾಯೇಲ್ಯರ ಅಪನಂಬಿಕೆಗೆ ಅವರಿಗೆ ಜ್ಞಾನವಿಲ್ಲವೆಂಬುದು ಕಾರಣವಲ್ಲ
14 ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? 15 ಇದಕ್ಕೆ ಸರಿಯಾಗಿ 10:15 ಯೆಶಾ 52:7; ನಹೂ. 1:15"ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ" ಎಂದು ಬರೆದಿದೆ. 16 10:16 ಇಬ್ರಿ. 4:2ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, 10:16 ಯೆಶಾ 53:1; ಯೋಹಾ 12:38"ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?" ಎಂದು ನುಡಿಯುತ್ತಾನೆ. 17 ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.