ಇಸ್ರಾಯೇಲ್ಯರ ಅಪನಂಬಿಕೆಗೆ ಅವರಿಗೆ ಜ್ಞಾನವಿಲ್ಲವೆಂಬುದು ಕಾರಣವಲ್ಲ
14 ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? 15 ಇದಕ್ಕೆ ಸರಿಯಾಗಿ 10:15 ಯೆಶಾ 52:7; ನಹೂ. 1:15"ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ" ಎಂದು ಬರೆದಿದೆ. 16 10:16 ಇಬ್ರಿ. 4:2ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, 10:16 ಯೆಶಾ 53:1; ಯೋಹಾ 12:38"ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?" ಎಂದು ನುಡಿಯುತ್ತಾನೆ. 17 ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.