ದೇವಜನರು ನಡೆದುಕೊಳ್ಳಬೇಕಾದ ರೀತಿ
1 ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, 12:1 ರೋಮಾ. 6:13,16,19; 1 ಕೊರಿ 6:20ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ 12:1 ಪವಿತ್ರವಾಗಿಯೂಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. 2 12:2 1 ಪೇತ್ರ 1:14; 1 ಯೋಹಾ 2:15ಇಹಲೋಕದ ನಡವಳಿಕೆಯನ್ನು ಅನುಸರಿಸದೆ 12:2 ತೀತ 3:5; ಎಫೆ 4:23; ಕೊಲೊ 3:10ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ 12:2 1 ಥೆಸ. 4:3ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ 12:3 ರೋಮಾ. 11:20; 12:16ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ 12:3 1 ಕೊರಿ 7:17; ಎಫೆ 4:7ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.