19 ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ 12:19 ಧರ್ಮೋ 32:35; ಇಬ್ರಿ. 10:30"‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ" ಬರೆದಿದೆ. 20 ಹಾಗಾದರೆ 12:20 ಜ್ಞಾ. 25:21,22; ಲೂಕ 6:27"ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು"12:20 ತನ್ನ ತಪ್ಪಿನ ಅರಿವು ಅವನಿಗೆ ಆಗುವಂತೆ. 21 ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.