ಅಧಿಕಾರಸ್ಥರಿಗೆ ಅಧೀನರಾಗಬೇಕೆಂದು ಬೋಧನೆ
1 13:1 ತೀತ 3:1, 1 ಪೇತ್ರ. 2:13 ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ 13:1 ಯೋಹಾ 19:11ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು. 2 ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು. 3 ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು. 4 13:4 2 ಪೂರ್ವ 19:6ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು. ಅವನು ಸುಮ್ಮನೆ ಕೈಯಲ್ಲಿ ಅಧಿಕಾರದ ದಂಡವನ್ನು ಹಿಡಿದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಮಾಡುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ. 5 ಆದಕಾರಣ ದಂಡನೆಯಾದೀತೆಂದು ಮಾತ್ರವಲ್ಲದೆ ಮನಸ್ಸಾಕ್ಷಿಗೆ ಒಪ್ಪುವಂತೆಯು ಅವನಿಗೆ ಅಧೀನನಾಗಿರು. 6 ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ. 7 13:7 ಮತ್ತಾ, 17:25, ಮಾರ್ಕ 12:17ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.