10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? 14:10 2 ಕೊರಿ 5:10ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು. 11 ಪವಿತ್ರ ಶಾಸ್ತ್ರದಲ್ಲಿ: 14:11 ಯೆಶಾ 45:23; ಫಿಲಿ. 2:10,11"ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ" ಎಂದು ಬರೆದಿದೆ. 12 ಹೀಗಿರಲಾಗಿ 14:12 ಮತ್ತಾ 12:36; 16:27; 1 ಪೇತ್ರ 4:5ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.