ಯೆಹೂದ್ಯರಾದರೂ ಅಪರಾಧಿಗಳೇ
1 ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, 2:1 ರೋಮಾ. 1:20ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, 2:1 ಮತ್ತಾ 7:2ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ. 2 ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು. 3 ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?