6 2:6 ಯೋಬ 34:11; ಕೀರ್ತ 62:12; ಜ್ಞಾ. 24:12; ಯೆರೆ 17:10; 32:19; ಮತ್ತಾ 16:27; 2 ಕೊರಿ 5:10ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, 7 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. 8 ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. 9 ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ 2:9 ಯೆಹೆ. 18:20ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು. 10 ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. 2:10 ರೋಮಾ. 1:16 11 2:11 ಅ. ಕೃ. 10:34ದೇವರಲ್ಲಿ ಪಕ್ಷಪಾತವಿಲ್ಲ.