6 2:6 ಯೋಬ 34:11; ಕೀರ್ತ 62:12; ಜ್ಞಾ. 24:12; ಯೆರೆ 17:10; 32:19; ಮತ್ತಾ 16:27; 2 ಕೊರಿ 5:10ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, 7 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. 8 ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.