ಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗ
21 ಈಗಲಾದರೋ 3:21 ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ 3:21 ಅ. ಕೃ. 10:43ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ. 22 ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. 23 3:23 ರೋಮಾ. 3:9ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. 24 3:24 ತೀತ. 3:7ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು 3:24 ಎಫೆ 1:7, ಕೊಲೊ 1:14, ಇಬ್ರಿ. 9:15ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.