ನೀತಿವಂತರಾದವರಿಗೆ ದೊರೆಯುವಂಥ ಫಲಗಳು
1 ಹೀಗಿರಲಾಗಿ ನಾವು 5:1 ರೋಮಾ. 3:28ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ 5:1 ರೋಮಾ. 15:13ದೇವರೊಂದಿಗೆ ನಮಗೆ ಸಮಾಧಾನವುಂಟು. 2 ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ 5:2 ಎಫೆ 2:18, ಇಬ್ರಿ. 10:19-20ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ. 3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. 4 ಏಕೆಂದರೆ 5:4 ಲೂಕ 21:19, ಯಾಕೋಬ. 1:3ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.