3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. 4 ಏಕೆಂದರೆ 5:4 ಲೂಕ 21:19, ಯಾಕೋಬ. 1:3ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು. 5 5:5 ಕೀರ್ತ 119:116, ಫಿಲಿ. 1:20ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, 5:5 ಅ. ಕೃ. 2:17, 18:33, ತೀತ. 3:6ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.