4 ಹಾಗೆಯೇ ನನ್ನ ಸಹೋದರರೇ, ನೀವು ಸಹ 7:4 ಎಫೆ 2:16, ಕೊಲೊ 1:22ಕ್ರಿಸ್ತನ ದೇಹದ ಮೂಲಕವಾಗಿ 7:4 ರೋಮಾ. 8:2, ಗಲಾ. 2:19, ಎಫೆ 2:15, ಕೊಲೊ 2:14ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. 7:4 ರೋಮಾ. 6:22, ಗಲಾ. 5:22, ಎಫೆ 5:9ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ. 5 ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ 7:5 ರೋಮಾ. 6:21-23ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು. 6 ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ 7:6 ರೋಮಾ. 6:4ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.