ಪವಿತ್ರಾತ್ಮನಿಂದ ನಡಿಸಲ್ಪಡುವ ಜೀವನ
1 ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ, 2 8:2 1 ಕೊರಿ 15:45; 2 ಕೊರಿ 3:6ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು 8:2 ನನ್ನನ್ನು ಎಂದು ಬರೆದಿದೆನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ 8:2 ರೋಮಾ. 8:12; 6:14,18; 7:4ವಿಮುಕ್ತಿಗೊಳಿಸಿತು. 3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ 8:3 ಗಲಾ. 9; ಇಬ್ರಿ. 7:18ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು 8:3 ಯಾಜ 16:5; ಇಬ್ರಿ. 10:6,8; 13:11ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ 8:3 ಫಿಲಿ. 2:7; ಯೋಹಾ 1:14ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು. 4 ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ 8:4 ಗಲಾ. 5:16,25ಪವಿತ್ರಾತ್ಮನಿಗನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವುದಕ್ಕಾಗಿ ಹಾಗೆ ಮಾಡಿದನು.