ದೇವರ ಮಕ್ಕಳಿಗೆ ಮುಂದೆ ಬರುವ ಮಹಿಮೆ
18 ನಮಗೋಸ್ಕರ ಮುಂದಿನ ಕಾಲದಲ್ಲಿ 8:18 1 ಪೇತ್ರ. 4:13; 5:1; 1 ಯೋಹಾ 3:2ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ 8:18 2 ಕೊರಿ 4:17ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ. 19 8:19 1 ಪೇತ್ರ. 4:13; 5:1; 1 ಯೋಹಾ 3:2ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ. 20 8:20 ಆದಿ 3:18,19; ಪ್ರಸಂಗಿ 1:2ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು 8:20 ಆದಿ 3:17ಒಳಪಡಿಸಿದವನ ಸಂಕಲ್ಪದಿಂದಲೇ, 21 ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನೆಂದರೆ 8:21 ಅ. ಕೃ. 3:21ಆ ಸೃಷ್ಟಿಯೂ ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುತ್ತವೆಂಬುದೇ.
22 ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ 23 8:23 2 ಕೊರಿ 5:5ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ 8:23 ರೋಮಾ. 8:19,25ದೇವರ ಮಕ್ಕಳ ಪದವಿಯನ್ನು ಅಂದರೆ 8:23 ರೋಮಾ. 7:24; ಫಿಲಿ. 3:20,21ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ. 24 ಆ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? 25 ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ 8:25 1 ಥೆಸ. 1:3; 5:8ತಾಳ್ಮೆಯಿಂದ ಕಾದುಕೊಂಡಿದ್ದೇವೆ. 26 ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ 8:26 ಯಾಕೋಬ 4:3ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ 8:26 ಜೆಕ. 12:10; ಎಫೆ 6:18ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ. 27 ಆದರೆ 8:27 1 ಸಮು 16:7; 1ಪೂರ್ವ 28:9; ಜ್ಞಾ. 15:11; 17:3; ಯೆರೆ 11:20, 17:10; ಲೂಕ 16:15; 1 ಥೆಸ. 2:4; ಪ್ರಕ 2:23ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; 8:27 ರೋಮಾ. 8:34ಆ ಆತ್ಮನು 8:27 1 ಯೋಹಾ 5:14ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.