28 ಇದಲ್ಲದೆ ದೇವರ ಸಂಕಲ್ಪದ ಮೇರೆಗೆ 8:28 ರೋಮಾ. 9:24; 1 ಕೊರಿ 1:9; ಗಲಾ. 1:15; ಎಫೆ 4:1-4; 2 ತಿಮೊ. 1:9; ಇಬ್ರಿ. 9:15ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ 8:28 ಎಜ್ರ 8:22ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ. 29 ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು. 30 ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ 8:30 1 ಕೊರಿ 6:11ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.