Pular para o conteúdo
Publicidade

ರೋಮಾಪುರದವರಿಗೆ 8:31-39

ಯೇಸು ಕ್ರಿಸ್ತನಲ್ಲಿ ದೇವರ ಪ್ರೀತಿ

31 ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? 8:31 2 ಅರಸು. 16; ಕೀರ್ತ 118:6; 1 ಯೋಹಾ 4:4ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು? 32 8:32 ಯೋಹಾ 3:16ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು 8:32 ರೋಮಾ. 4:25ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ? 33 ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? 8:33 ಯೆಶಾ 50:8,9ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ. 34 ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು 8:34 ಇಬ್ರಿ. 7:5; 1 ಯೋಹಾ 2:1ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ? 35 ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? 36 8:36 ಕೀರ್ತ 44:22"ದೇವರೇ ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗುತ್ತಿದ್ದೇವೆ. ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಎಣಿಸಿದರು." ಎಂಬುದಾಗಿ ಬರೆದಿರುವಂತೆ ಆಗುತ್ತದಲ್ಲಾ. 37 ಆದರೆ 8:37 ಗಲಾ. 2:20; ಎಫೆ 5:2; ಪ್ರಕ 1:5; 3:9ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ 8:37 1 ಕೊರಿ 15:57; ಯೋಹಾ 16:33ಪೂರ್ಣ ಜಯಶಾಲಿಗಳಾಗಿದ್ದೇವೆ. 38 ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, 39 ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.

Estes versículos te tocaram? Ore agora!

+581 estão orando agora.

Junte-se à corrente de oração.