6 8:6 ರೋಮಾ. 6:21; 8:13 ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ. 7 ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು 8:7 ಯಾಕೋಬ 4:4ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, 8:7 1 ಕೊರಿ 2:14ಒಳಪಡುವುದಕ್ಕಾಗುವುದೂ ಇಲ್ಲ. 8 ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.