11 ಆಕೆಯು, "ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ. 12 ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ, 13 ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ" ಅಂದಳು.