14 ಆಗ ಹೆಂಗಸರು ನವೊಮಿಗೆ "ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ. 15 ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ" ಎಂದು ಹೇಳಿದರು.
Publicidade