7 ಯಾವುದಾದರೊಂದು ವಸ್ತುವನ್ನು ಬಿಡಿಸಿಕೊಳ್ಳುವಾಗಲೂ, ತೆಗೆದುಕೊಳ್ಳುವಾಗಲೂ, ಕೊಡುವಾಗಲೂ ಮಾತನ್ನು ದೃಢಪಡಿಸುವುದಕ್ಕೋಸ್ಕರ ಇಸ್ರಾಯೇಲರಲ್ಲಿ ಪೂರ್ವಕಾಲದಿಂದ ಇದ್ದ ಪದ್ಧತಿ ಯಾವುದಂದರೆ, ಕೊಡುವವನು ತೆಗೆದುಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಬಿಚ್ಚಿ ಕೊಡಬೇಕು; ಇದರಿಂದ ಮಾತು ದೃಢವಾಯಿತೆಂದು ಇಸ್ರಾಯೇಲ್ಯರು ತಿಳಿದುಕೊಳ್ಳುವರು.
14 ಆಗ ಹೆಂಗಸರು ನವೊಮಿಗೆ "ಈ ಹೊತ್ತು ನಿನಗೆ ಬಾಧ್ಯಸ್ಥನನ್ನು ದಯಪಾಲಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಈ ಮಗನು ಇಸ್ರಾಯೇಲ್ಯರಲ್ಲಿ ಪ್ರಖಾತ್ಯನಾಗಲಿ.
17 ನೆರೆಹೊರೆಯ ಹೆಂಗಸರು ನವೊಮಿಗೆ "ಒಬ್ಬ ಮಗನು ಹುಟ್ಟಿದ್ದಾನೆಂದು" ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು.
22 ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.