16 ಆ ದಿನದಲ್ಲಿ ಯೆರೂಸಲೇಮಿಗೆ, "ಚೀಯೋನೇ,
ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;
17 ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು;
ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು;
ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು3:17 ನಿನ್ನ ಜೀವನವನ್ನು ನೂತನಗೊಳಿಸುವನು ನಿನ್ನನ್ನು ಶಾಂತಗೊಳಿಸುವನು ಅಥವಾ ನಿನ್ನನ್ನು ಪುನಃ ಚೇತನಗೊಳಿಸುವನು.;
ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.