Publicidade

Salmos 1

ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು

1 ಯಾರು ದುಷ್ಟರ ಆಲೋಚನೆಯಂತೆ ನಡೆಯದೆ,

ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ,

ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,

2 ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ,

ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.

3 ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು.

ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ.

ಅದರ ಎಲೆ ಬಾಡುವುದೇ ಇಲ್ಲ.

ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

4 ದುಷ್ಟರೋ ಹಾಗಲ್ಲ;

ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.

5 ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ,

ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.

6 ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು;

ದುಷ್ಟರ ಮಾರ್ಗವೋ ನಾಶವಾಗುವುದು.

Veja também

Publicidade
Bíblia Online Bíblia Online

Bíblia Online • Versão: 2026-06-16_18-40-07-