Publicidade

Salmos 101

ರಾಜಶ್ರೇಷ್ಠನ ಪ್ರತಿಜ್ಞೆ
ದಾವೀದನ ಕೀರ್ತನೆ.

1 ಪ್ರೀತಿ, ನೀತಿಗಳನ್ನು ಕುರಿತು ಹಾಡುವೆನು;

ಯೆಹೋವನೇ, ನಿನ್ನನ್ನು ಕೊಂಡಾಡುವೆನು.

2 ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು;

ನನಗೆ ಯಾವಾಗ ದರ್ಶನಕೊಡುವಿ?

ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.

3 ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ;

ದುರಾಚಾರವನ್ನು ಹಗೆಮಾಡುತ್ತೇನೆ,

ಅದರ ಗೊಡವೆಯೇ ನನಗೆ ಬೇಡ.

4 ಮೂರ್ಖತನವು ನನ್ನನ್ನು ಬಿಟ್ಟು ಹೋಗಲಿ;

ಕೆಟ್ಟತನವನ್ನು ಅರಿಯದಿರುವೆನು.

5 ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು;

ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.

6 ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;

ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು,

ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.

7 ಮೋಸಗಾರನು ನನ್ನ ಮನೆಯಲ್ಲಿ ಇರಲೇಬಾರದು;

ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.

8 ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ,

ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

Veja também

Publicidade
Bíblia Online Bíblia Online

Bíblia Online • Versão: 2026-06-18_14-04-22-