19 ಯೆಹೋವನು ಮೇಲಣ ಲೋಕದಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ;
ಆತನು ಸಮಸ್ತವನ್ನೂ ಆಳುತ್ತಾನೆ.
20 ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ
ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ,
ಯೆಹೋವನನ್ನು ಕೊಂಡಾಡಿರಿ.
21 ಆತನ ಸೈನ್ಯಗಳೇ, ಆತನ ಚಿತ್ತವನ್ನು ನೆರವೇರಿಸುವ ಸೇವಕರೇ,
ಯೆಹೋವನನ್ನು ಕೊಂಡಾಡಿರಿ.
22 ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ,
ಯೆಹೋವನನ್ನು ಕೊಂಡಾಡಿರಿ.
ನನ್ನ ಮನವೇ, ಯೆಹೋವನನ್ನು ಕೊಂಡಾಡು.