Pular para o conteúdo
Publicidade

ಕೀರ್ತನೆಗಳು 11:4-7

IRVKAN Indian Revised Version (IRV) - Kannada - 2019

4 ಯೆಹೋವನು ತನ್ನ ಪರಿಶುದ್ಧಮಂದಿರದಲ್ಲಿದ್ದಾನೆ;

ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ.

ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ;

ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.

5 ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ;

ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.

6 ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ.

ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.

7 ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ.

ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.

Em outras traduções

  1. OKCV Kannada Contemporary Version

    4 ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ;

    ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ.

    ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ;

    ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.

    5 ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ,

    ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.

    6 ಅವರು ದುಷ್ಟರ ಮೇಲೆ ಬೆಂಕಿಯನ್ನೂ

    ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ;

    ಇವೇ ದುಷ್ಟರ ಪಾಲಾಗಿರಲಿ.

    7 ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು.

    ಅವರು ನ್ಯಾಯವನ್ನು ಪ್ರೀತಿಸುತ್ತಾರೆ;

    ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.